ಅನುದಾನ ಮಂಜೂರು ಮಾಡಿ

BDM 232
Published on

ಬಾದಾಮಿ: ಬಾದಾಮಿ ಕ್ಷೇತ್ರದ ಕೆರೂರ ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಒತ್ತಾಯಿಸಿದರು.

ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಬಾದಾಮಿ ಕ್ಷೇತ್ರದಿಂದ ಆಗಮಿಸಿದ್ದ ನಿಯೋಗದಿಂದ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಗಳವಾರ ಮನವಿ ಸ್ವೀಕರಿಸಿದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಮೂಲಕ ಅವರು ಮಾತನಾಡಿದರು.

2018-19 ನೇ ಸಾಲಿನ ಬಜೆಟ್‌ನಲ್ಲಿ 525 ಕೋಟಿ ರೂ. ವೆಚ್ಚದ ಏತ ನೀರಾವರಿ ಯೋಜನೆಗೆ 300 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿತ್ತು. ಆದರೆ, ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಮುಂಬರುವ ಬಜೆಟ್‌ನಲ್ಲಿ ಯೋಜನೆ ಜಾರಿಗೆ ಅನುದಾನ ಮಂಜೂರು ಮಾಡಬೇಕು. ಜತೆಗೆ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 1800 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಕುರಿತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೂ ದೂರವಾಣಿ ಮೂಲಕ ಮಾತನಾಡಿ, ಯೋಜನೆ ಜಾರಿಗೆ ತರದಿದ್ದರೆ ವಿಧಾಸಭೆಯಲ್ಲಿ ಧರಣಿ ನಡೆಸುವುದಾಗಿ ಹೇಳಿದರು ಎಂದು ನಿಯೋಗದಿಂದ ತಿಳಿದು ಬಂದಿದೆ.

ಮಾಜಿ ಶಾಸಕ ಎಚ್.ವೈ. ಮೇಟಿ, ಕಾಂಗ್ರೆಸ್ ಮುಖಂಡ ಎಂ.ಬಿ. ಹಂಗರಗಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಪಿ.ಆರ್. ಗೌಡರ, ಮಧು ಯಡ್ರಾಮಿ, ನಾಗಪ್ಪ ಅಡಪಟ್ಟಿ ಸೇರಿ ಕಾಂಗ್ರೆಸ್ ಮುಖಂಡರು ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net