ಕುಮಾರಸ್ವಾಮಿ ವಿದ್ಯಾಲಯ ಪ್ರಥಮ : ತಾಲೂಕುಮಟ್ಟದ ಷಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

Badminton tournament
ಪಂದ್ಯಾಟವನ್ನು ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರ ಕಾರ್ತಿಕ್ ಕಕ್ಕೆಪದವು ಉದ್ಘಾಟಿಸಿದರು. ಚಂದ್ರಶೇಖರ ನಾಯರ್, ಶಿವರಾಮ ಯೇನೆಕಲ್ಲು, ಭಾರತಿ ದಿನೇಶ್ ಉಪಸ್ಥಿತರಿದ್ದರು.
Published on

ಸುಬ್ರಹ್ಮಣ್ಯ: ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕುಮಟ್ಟದ ಪ್ರಾಥಮಿಕ ಬಾಲಕ-ಬಾಲಕಿಯರ ಷಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ ಮಂಗಳವಾರ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆಯಿತು.

ರಾಜ್ಯಮಟ್ಟದ ಷಟ್ಲ್ ಬ್ಯಾಡ್ಮಿಂಟನ್ ಆಟಗಾರ ಕಾರ್ತಿಕ್ ಕಕ್ಕೆಪದವು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ವಹಿಸಿದ್ದರು. ಸುಬ್ರಹ್ಮಣ್ಯ ಗ್ರಾಪಂ ಅಧ್ಯಕ್ಷೆ ಸುಜಾತ ಕಲ್ಲಾಜೆ, ಕುಮಾರಸ್ವಾಮಿ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್, ಆಡಳಿತ ಮಂಡಳಿ ಉಪಾಧ್ಯಕ್ಷ ಶಿವರಾಮ್ ಯೇನೆಕಲ್, ಸೀನಿಯರ್ ಚೇಂಬರ್ ಅಧ್ಯಕ್ಷ ರವಿ ಕಕ್ಕೆಪದವು, ಮುಖ್ಯಶಿಕ್ಷಕಿ ವಿದ್ಯಾರತ್ನ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ದಿನಕರ್ ದೇರಪ್ಪಜ್ಜನಮನೆ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಕಾರ್ತಿಕೆ ವಂದಿಸಿದರು. ಬಳಿಕ ಪಂದ್ಯಾಟಗಳು ನೆರವೇರಿದವು.

ಫಲಿತಾಂಶ: ಬಾಲಕರ ವಿಭಾಗದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ(ಪ್ರಥಮ), ಸೇಂಟ್ ಬ್ರಿಜಿಡ್ಸ್ ಸುಳ್ಯ(ದ್ವಿತೀಯ), ಬಾಲಕಿಯರ ವಿಭಾಗದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ(ಪ್ರಥಮ), ಸೇಂಟ್ ಬ್ರಿಜಿಡ್ಸ್ ಸುಳ್ಯ(ದ್ವಿತೀಯ) ಸ್ಥಾನ ಗಳಿಸಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಪ್ರಸಾದ್ ಎನ್ ಮತ್ತು ನಿವೃತ್ತ ಯೋಧ ಸುಬ್ರಹ್ಮಣ್ಯ ಅತ್ಯಾಡಿ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net