

ಗಂಗೊಳ್ಳಿ: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಆಶ್ರಯದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕುಂದಾಪುರ ವಲಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಗುರುವಾರ ಉದ್ಘಾಟಿಸಿ ಮಾತನಾಡಿದರು.
ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ಶಿಕ್ಷಕ- ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ತಾ, ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್, ದೀಕ್ಷಿತ್ ಮೇಸ್ತ, ಲಾವಣ್ಯಾ ಉಪಸ್ಥಿತರಿದ್ದರು. ಸಹಶಿಕ್ಷಕಿಯರಾದ ರೇಷ್ಮಾ ನಾಯಕ್ ಸ್ವಾಗತಿಸಿದರು. ಸಂಗೀತಾ ಕಾರ್ಯಕ್ರಮ ನಿರ್ವಹಿಸಿದರು. ಜಯಶ್ರೀ ನಾಯಕ್ ವಂದಿಸಿದರು.