ಮೇ.೪, ೫ರಂದು ಬ್ಯಾಡ್ಮಿಂಟನ್ ಪಂದ್ಯಾವಳಿ

24MDK8
Published on

ಮಡಿಕೇರಿ: ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಕೊಡಗಿನ ವಿದ್ಯಾರ್ಥಿಗಳಿಗಾಗಿ ಮೇ.೪ ಮತ್ತು ೫ ರಂದು ಜಿಲ್ಲಾ ಮಟ್ಟದ ರ‌್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕ್ರೀಡಾ ಸಮಿತಿ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾವಳಿ ೧೧, ೧೩, ೧೫, ೧೭ ಮತ್ತು ೧೯ ವರ್ಷದೊಳಗಿನ ಬಾಲಕ, ಬಾಲಕಿಯರಿಗಾಗಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ನಡೆಯಲಿದೆ. ೧೫ ಮತ್ತು ೧೯ ವರ್ಷದ ಬಾಲಕ, ಬಾಲಕಿಯರಿಗಾಗಿ ಮಿಶ್ರ ಡಬಲ್ಸ್ ಪಂದ್ಯಾವಳಿ ಆಯೋಜಿಸಲಾಗಿದೆ. ತಂಡಗಳ ನೋಂದಣಿಗೆ ಮೇ೧ ಕೊನೆಯ ದಿನವಾಗಿದೆ ಎಂದು ತಿಳಿಸಿದರು.


ಪಂದ್ಯಾವಳಿಯ ಪ್ರಥಮ ಹಾಗೂ ದ್ವಿತೀಯ ವಿಜೇತರಿಗೆ ಆಕರ್ಷಕ ನಗದು, ಟ್ರೋಫಿ ಮತ್ತು ಪ್ರಮಾಣಪತ್ರ ನೀಡಲಾಗುವುದು. ಬಿಎಐ ಮತ್ತು ಕೆಬಿಎ ಬ್ಯಾಡ್ಮಿಂಟನ್ ನಿಯಮಗಳಂತೆ ಪಂದ್ಯಾವಳಿ ನಡೆಯಲಿದ್ದು, ಅಂಡರ್ ೧೧-೨೦೧೪, ೧೩-೨೦೧೨, ೧೫-೨೦೧೦, ೧೭-೨೦೦೮ ಹಾಗೂ ಅಂಡರ್-೧೯-೨೦೦೬ ಜನಿಸಿದ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜ್ಯೋತಿ ಸೋಮಯ್ಯ ೭೪೮೩೭೧೬೨೭೪ ಸಂಪರ್ಕಿಸಬಹುದಾಗಿದೆ ಎಂದು ವಿವರಿಸಿದರು.


ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ನೆರವಂಡ ಜಿ.ಜೀವನ್, ಉಪಾಧ್ಯಕ್ಷೆ ಜ್ಯೋತಿ ಸೋಮಯ್ಯ, ಗೌರವ ಕಾರ್ಯದರ್ಶಿ ಅನಿಲ್ ಲೋಬೋ, ಸಹ ಕಾರ್ಯದರ್ಶಿ ಸುಮತಿ ವಿಶ್ವನಾಥನ್ ಹಾಗೂ ಮಾಜಿ ಅಧ್ಯಕ್ಷ ಡಾ.ಮೋಹನ್ ಅಪ್ಪಾಜಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net