

ಹುಬ್ಬಳ್ಳಿ: ಕೊಲ್ಹಾಪುರದಿಂದ ಗುಂತಕಲ್‌ಗೆ ಹೋಗಲು ಹರಿಪ್ರಿಯಾ ಎಕ್ಸಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ 2.02 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ನಡೆದಿದೆ.
ರಮಾದೇವಿ ಯೋಗೇಶ ಅವರು ಕೊಲ್ಹಾಪುರ ಮಹಾಲಕ್ಷ್ಮೀ ದರ್ಶನ ಪಡೆದು ಮರಳಿ ಬರುವಾಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಗಮನಿಸಿದಾಗ, 20 ಗ್ರಾಂ ನೆಕ್ಲೇಸ್, 24 ಸಾವಿರ ರೂ. ನಗದು, 8 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಇದ್ದ ಬ್ಯಾಗ್ ಕಳವಾಗಿದೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.