ಕಷ್ಟವಾದರೂ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಕಿವಿಮಾತು

Bag
Published on

ಮಂಡ್ಯ: ಪಾಲಕರಿಗೆ ಎಷ್ಟೇ ಕಷ್ಟವಾದರೂ ತಪ್ಪದೇ ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದು ಶಂಭು ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಕಿವಿಮಾತು ಹೇಳಿದರು.
ತಾಲೂಕಿನ ಶಿವಪುರ ಗ್ರಾಮದಲ್ಲಿ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೂಡ ಪಾಲಕರ ಆಸೆಯನ್ನು ಗಮನದಲ್ಲಿಟ್ಟುಕೊಂಡು ಕಷ್ಟಪಟ್ಟು ಓದಿ ಸಾಧನೆ ಮಾಡಬೇಕು ಎಂದರು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಶಂಭುಗೌಡ, ಚಂದಗಾಲು ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ಶಿವಪುರ ಗ್ರಾಪಂ ಅಧ್ಯಕ್ಷ ರೇವಣ್ಣ, ಪುಟ್ಟಸ್ವಾಮಿ, ಬಸವರಾಜು ಇತರರಿದ್ದರು.
ಇದೇ ವೇಳೆ ಬಸರಾಳು ಹೋಬಳಿ ವ್ಯಾಪ್ತಿಯ ಚಲ್ಲನಾಯಕನಹಳ್ಳಿ, ಚಂದಗಾಲು, ಮೋಳೆ, ರಾಯಶೆಟ್ಟಿಪುರ, ದೊಡ್ಡಕೊತ್ತಗೆರೆ, ಚಿಕ್ಕಕೊತ್ತಗೆರೆ, ಜಿ.ಹೊಸಹಳ್ಳಿ, ಶಿವಪುರ, ಮೋಳೆ ಶಿವಪುರ, ಗಣಿಗ, ಮಾಚಗೌಡನಹಳ್ಳಿ ಮತ್ತು ಮಾರಸಿಂಗನಹಳ್ಳಿ ಗ್ರಾಮದ ಶಾಲೆಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net