ಮಕ್ಕಳಿಗೆ ವೈಚಾರಿಕತೆಯ ಶಿಕ್ಷಣ ಕೊಡಿಸಿ: ಶಾಸಕ ಸಿ.ಎಸ್​.ಪುಟ್ಟರಾಜು ಸಲಹೆ

ವಿತರಣೆ
Published on

ಮಂಡ್ಯ: ಮನುಷ್ಯನಿಗೆ ಶಿಕ್ಷಣ ಬಹಳ ಅಗತ್ಯವಾಗಿದ್ದು, ರಾಷ್ಟ್ರದ ಭವಿಷ್ಯ ರೂಪಿಸುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಎಲ್ಲರ ಜವಾಬ್ದಾರಿ ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಅಭಿಪ್ರಾಯಪಟ್ಟರು.
ತಾಲೂಕಿನ ದುದ್ದ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶಂಭು ಸೇವಾ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವೈಜ್ಞಾನಿಕ ಜಗತ್ತಿನಲ್ಲಿ ಮಕ್ಕಳಲ್ಲಿ ವೈಚಾರಿಕತೆ ಬೆಳೆಸುವ ಮೂಲಕ ಬಹಳ ಶಿಸ್ತಿನಿಂದ ವಿದ್ಯಾರ್ಥಿ ಜೀವನವನ್ನು ರೂಪಿಸಬೇಕಾಗಿದೆ. ಸರ್ಕಾರ ಮಕ್ಕಳ ಭವಿಷ್ಯ ರೂಪಿಸುವ ಭಾಗವಾಗಿ ಸರ್ಕಾರಿ ಮತ್ತು ಅನುದಾನದ ಶಾಲೆಗಳಲ್ಲಿ ಮೊಟ್ಟೆ,ಬಾಳೆಹಣ್ಣು ನೀಡುವ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ತಿಳಿಸಿದರು.
ವರುಣನ ಕೃಪೆಯಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇನ್ನೊಂದು ವಾರದಲ್ಲಿ ದುದ್ದ ಹೋಬಳಿ ವ್ಯಾಪ್ತಿಯ ಎಲ್ಲ ಕೆರೆಗಳು ತುಂಬುವ ವಿಶ್ವಾಸವಿದೆ. ಸುಮಾರು ೭೫ ಕಿ.ಮೀ ವ್ಯಾಪ್ತಿಯ ಪೈಪ್ ಲೈನ್ ಕಾಮಗಾರಿ ಹಗಲು ರಾತ್ರಿ ಮಾಡಿಸಿ ಪೂರ್ಣಗೊಳಿಸಲಾಗುತ್ತಿದೆ. ಚಿಂದಗಿರಿ ಕೊಪ್ಪಲು ಬಳಿ ಆಗಿದ್ದ ಸಮಸ್ಯೆಯನ್ನು ಬಗೆಹರಿಸಿದ್ದು, ಎಲ್ಲ ಕೆರೆಗಳಿಗೂ ನೀರು ತುಂಬಿಸಲಾಗು
ವುದು ಎಂದು ಹೇಳಿದರು.
ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿತ ಅಭ್ಯರ್ಥಿಯೂ ಆದ ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಮಾತನಾಡಿ, ಟ್ರಸ್ಟ್ ವತಿಯಿಂದ ಧರ್ಮಸ್ಥಳ ಧರ್ಮಯಾತ್ರೆಗೆ ಇನ್ನೊಂದು ವಾರದಲ್ಲಿ ಚಾಲನೆ ನೀಡಲಾಗುವುದು. ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net