ಬಾಗಲಕೋಟೆ (ಜಿಲ್ಲೆ)

ಜಮಖಂಡಿ ನಗರದಲ್ಲಿ ನಡೆದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ‘2027ರ ದಿನದರ್ಶಿಕೆ’ ಬಿಡುಗಡೆಗೊಳಿಸಿದರು. ಬಾಳೆಹೊನ್ನೂರು ರಂಭಾಪುರಿ ಮಹಾಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು, ಶಾಸಕ ನಾಡೋಜ ಜಗದೀಶ ಗುಡಗುಂಟಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಇತರರಿದ್ದಾರೆ.
ಜಮಖಂಡಿ ನಗರದ ಕಲೂತಿ ಕಲ್ಯಾಣ ಮಂಟಪದಲ್ಲಿ ಬಾಳೆಹೊನ್ನೂರು ರಂಭಾಪುರಿ ಮಹಾಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು, ಶಾಸಕ ನಾಡೋಜ ಜಗದೀಶ ಗುಡಗುಂಟಿ ಇಷ್ಟಲಿಂಗ ಮಹಾಪೂಜೆಯಲ್ಲಿ ಪಾಲ್ಗೊಂಡಿದ್ದರು.
ಹುನಗುಂದ ತಾಲೂಕಿನ ಬಿಸಲದಿನ್ನಿ ಗ್ರಾಮದ ರೈತ ಟ್ಯಾಂಕರ್ ಮೂಲಕ ಮೆಣಸಿನಕಾಯಿ ಬೆಳೆಗೆ ನೀರು ಹಾಯಿಸುತ್ತಿರುವುದು.
ಗುಳೇದಗುಡ್ಡದಲ್ಲಿ ಆರ್‌ಎಸ್‌ಎಸ್‌ನ ವಿಜಯದಶಮಿ ಪಥಸಂಚಲನದ ಅಂಗವಾಗಿ ಭಾರತಮಾತೆ ಹಾಗೂ ಗೋಮಾತೆ ಪೂಜೆ ಸಲ್ಲಿಸಲಾಯಿತು. ಶಾಂತಗೌಡ ಪಾಟೀಲ, ಕಾಡಸಿದ್ಧೇಶ್ವರ ಶ್ರೀಗಳು, ವಿಠ್ಠಲ ಪತ್ತಾರ, ಸಂಪತ್ತಕುಮಾರ ರಾಠಿ, ಕಮಲಕಿಶೋರ ಮಾಲಪಾಣಿ, ಭುವನೇಶ ಪೂಜಾರ ಇತರರಿದ್ದರು.
ಕಾನ್ಪುರದಲ್ಲಿ ನಡೆದ ಭಾರತೀಯ ಸಕ್ಕರೆ ಸಂಸ್ಥೆಯ 91ನೇ ವಾರ್ಷಿಕ ಮಹಾಸಭೆಯಲ್ಲಿ ಕಬ್ಬು ಬೆಳೆಗಾರರಾದ ಬಸವರಾಜ ಯಲಗೊಣ, ಮಹಾವೀರ ಪಾಟೀಲ ಹಾಗೂ ರಮೇಶ ಅವಟಿ ರಾಷ್ಟ್ರಮಟ್ಟದ ಪ್ರಗತಿಪರ ರೈತ ಪ್ರಶಸ್ತಿ ಸ್ವೀಕರಿಸಿದರು. ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೇನ್ ಪಟೇಲ್, ಸಕ್ಕರೆ ಸಚಿವಲಕ್ಷ್ಮೀ ನಾರಾಯಣ ಚೌಧರಿ, ಸ್ಥಳೀಯ ಶಾಸಕ ನಿಲಿಮಾ ಕಟಿಯಾರ್, ಸಂಸದ ರಮೇಶ ಅವಸ್ತಿ ಇತರರಿದ್ದರು.
ಜಮಖಂಡಿ ನಗರದಲ್ಲಿ ನಡೆದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು. ಶಾಸಕ ಜಗದೀಶ ಗುಡಗುಂಟಿ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಇತರರಿದ್ದರು.
ಜಮಖಂಡಿಯಲ್ಲಿ ನಡೆದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಶಿವಮೊಗ್ಗದ ಆಸರೆ ಟ್ರಸ್ಟ್ ಅಧ್ಯಕ್ಷ ಹಾಗೂ ಪತ್ರಕರ್ತ ಕೆ.ಎಂ. ಸತೀಶಗೌಡ ಅವರಿಗೆ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಸಾಧನ ಸಿರಿ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಜಗದೀಶ ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಇದ್ದರು.
ಜಮಖಂಡಿ ನಗರದ ಸಮೀಪದ ಕಡಪಟ್ಟಿ ಬಸವಣ್ಣ ದೇವಸ್ಥಾನದ ಆವರಣದಲ್ಲಿರುವ ಮಾನವ ಧರ್ಮ ಮಂಟಪದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಬಾಳ ಬೆಳಕು ಕೃತಿಯನ್ನು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಿಡುಗಡೆಗೊಳಿಸಿದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಜಗದೀಶ ಗುಡಗುಂಟಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಡಾ. ಶಿವಕುಮಾರ ಶಿವಾಚಾರ್ಯ ಸ್ವಾಮಿಗಳು, ಮುತ್ತಣ್ಣ ಹಿಪ್ಪರಗಿ ಇತರರಿದ್ದರು.
Read More
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net