ಬಿಸಿಯೂಟ ನೌಕರರ ಪ್ರತಿಭಟನೆ

Protest
Published on

ಬಾಗಲಕೋಟೆ: ನೂತನ ಶಿಕ್ಷಣ ನೀತಿ 2020 ಜಾರಿಗೊಳಿಸುವಾಗ ಬಿಸಿಯೂಟ ಯೋಜನೆಯನ್ನು ಬಲಿಷ್ಠ ಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಸಿಯೂಟ ನೌಕರರು ಜಿಲ್ಲಾಡಳಿತ ಭವನ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಬಿಸಿಯೂಟ ನೌಕರರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಡಳಿತ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಬಿಸಿಯೂಟ ನೌಕರರನ್ನು ಶಾಲಾ ಸಿಬ್ಬಂದಿಗಳು ಎಂದು ನೇಮಿಸಬೇಕು, 4 ಗಂಟೆಯಿಂದ 6 ಗಂಟೆ ವರೆಗೆ ಅಕ್ಷರ ದಾಸೋಹ ಕೈಪಿಡಿ ಬದಲಾಯಿಸಿಬೇಕು, ಕೋವಿಡ್ ವೇತನ ಎಪ್ರೀಲ್ 2020 ದಿಂದ ಕೊಡಬೇಕು, ಪ್ರತಿ ತಿಂಗಳು 5 ತಾರಿಕನೊಳಗೆ ವೇತನ ನೀಡಬೇಕು, ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, ಪ್ರತಿಯೊಂದು ಶಾಲೆಯಲ್ಲಿ ಕನಿಷ್ಠ 2 ಅಡುಗೆ ಸಿಬ್ಬಂದಿ ನೇಮಕ ಮಾಡಬೇಕು ಎಂದು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಎಚ್.ವೈ.ಚಲವಾದಿ, ಜೆ.ಎಸ್.ಕಾಟೆ,ಆರ್‌ಡಿ.ಮ್ಯಾಗೇರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net