ಬಾಗಲಕೋಟೆಗೂ ಕಪ್ಪು ಶಿಲೀಂದ್ರ ಎಂಟ್ರಿ

BKT 152
Published on

ಬಾಗಲಕೋಟೆ: ಡೆಡ್ಲಿ ಕರೊನಾ ಹೊಡೆತದಿಂದ ಚೇತರಿಸಿಕೊಳ್ಳಲು ಆಗದಂತಹ ಪರಿಸ್ಥಿತಿ ಇರುವಾಗಲೇ ಇದೀಗ ಬಾಗಲಕೋಟೆ ಜಿಲ್ಲೆಗೆ ಮಾರಣಾಂತಿಕ ಬ್ಲಾೃಕ್ ಫಂಗಸ್ ಕಾಲಿಟ್ಟಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಕರೊನಾದಿಂದ ಚೇತರಿಸಿಕೊಂಡಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕಪ್ಪು ಶಿಲೀಂದ್ರ ಪತ್ತೆ ಆಗಿದೆ. ಅವರಲ್ಲಿ ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕರೊನಾ ಚಿಕಿತ್ಸೆ ಪಡೆದಿದ್ದರೆ ಮತ್ತೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಓರ್ವರು ಹೊರ ರಾಜ್ಯದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಬ್ಬ ಸೋಂಕಿತರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕು ಕಂಡು ಬಂದಿರುವ ಇಬ್ಬರು ಸಹ 40 ಮತ್ತು 55 ವಯಸ್ಸಿನೊಳಗಿನವರು ಎಂದು ತಿಳಿದು ಬಂದಿದೆ.

ಕೋವಿಡ್ ಚಿಕಿತ್ಸೆಯಲ್ಲಿ ಸ್ಟಿರಾಯ್ಡಿ ಔಷಧ ಸೇವನೆ ಹಾಗೂ ಇತರ ರೋಗಗಳು ಇದ್ದಿದ್ದರಿಂದ ಈ ಸೋಂಕು ಬರುವ ಸಾಧ್ಯತೆ ಇದೆ. ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು, ನಿರ್ಲಕ್ಷೃ ಬೇಡ ಎಂದು ವೈದ್ಯರು ಹೇಳುತ್ತಾರೆ.

ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿರುವ ಒಬ್ಬರಿಗೆ ಕಪ್ಪು ಶಿಲೀಂದ್ರ ಪತ್ತೆಯಾಗಿದ್ದು, ಚಿಕಿತ್ಸೆ ನಡೆದಿದೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
- ಕೆ.ರಾಜೇಂದ್ರ ಜಿಲ್ಲಾಧಿಕಾರಿ, ಬಾಗಲಕೋಟೆ

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net