ಇಂದು ಸಿಎಎ ಪರ ಬಿಜೆಪಿ ಬೃಹತ್ ರ‌್ಯಾಲಿ

VEERANNA CHARANTIMATT
Published on

ಬಾಗಲಕೋಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಬೆಂಬಲಿಸಿ ಬಾಗಲಕೋಟೆ ನಗರದಲ್ಲಿ ಜ.12 ರಂದು ಬಿಜೆಪಿ ನೇತೃತ್ವದಲ್ಲಿ ಬೃಹತ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಬೃಹತ್ ರ‌್ಯಾಲಿಯು ಶಿವಾನಂದ ಜಿನ್‌ನಲ್ಲಿರುವ ಬಿಜೆಪಿ ಕಚೇರಿಯಿಂದ ಆರಂಭವಾಗಿ ನಗರದ ವಿವಿಧೆಡೆ ಸಂಚರಿಸಿ ಚರಂತಿಮಠ ತಲುಪಿ ಸಮಾವೇಶವಾಗಿ ಮಾರ್ಪಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟಿಲ್, ಡಿಸಿಎಂ ಗೋವಿಂದ ಕಾರಜೋಳ, ಶಾಸಕರಾದ ದೊಡ್ಡನಗೌಡ ಪಾಟೀಲ, ಮುರುಗೇಶ ನಿರಾಣಿ, ವಿ.ಪ. ಸದಸ್ಯ ಹನುಮಂತ ನಿರಾಣಿ, ಜಿಪಂ, ತಾಪಂ ಸದಸ್ಯರು ಪಾಲ್ಗೊಳ್ಳಲಿದ್ದಾರೆ. 10 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಮುಖಂಡ ಶಿವಾನಂದ ಟವಳಿ ಮಾತನಾಡಿ, ಸಿಎಎ ಪರವಾಗಿ ದೇಶ ನಿಂತಿದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಮುಖಂಡರಾದ ಹನುಮಂತ ನಾರಾಯಣಿ, ಯಲ್ಲಪ್ಪ ಬೆಂಡಿಗೇರಿ, ಸಾಗರ ಬಂಡಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ನವನಗರದ ಯೂನಿಟ್-1 ಮತ್ತು 2ರಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಶೀಘ್ರದಲ್ಲಿ ಯೂನಿಟ್-3 ಕಾಮಗಾರಿ ಕೂಡ ಆರಂಭವಾಗಲಿದೆ. ಬಾಗಲಕೋಟೆ ಸಂತ್ರಸ್ತರಿಗೆ ಸಕಲ ರೀತಿಯಿಂದ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
- ವೀರಣ್ಣ ಚರಂತಿಮಠ ಶಾಸಕ ಬಾಗಲಕೋಟೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net