ಸರ್ಕಾರದ ವೈಫಲ್ಯ ಖಂಡಿಸಿ ಮಾರ್ಚ್‌ನಲ್ಲಿ ಪ್ರತಿಭಟನೆ

Protest
Published on

ಬಾಗಲಕೋಟೆ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ರಾಜ್ಯ, ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಮಾರ್ಚ್ ತಿಂಗಳಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷ ರಾಜು ಮನ್ನಿಕೇರಿ ತಿಳಿಸಿದರು.

ಸರ್ಕಾರಗಳು ಪರಿಶಿಷ್ಟ ಜಾತಿ, ಪಂಗಡ ಜನಾಂಗದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿವೆ. ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ. 3900 ಕೋಟಿ ರೂ. ಬಾಕಿ ಉಳಿಸಿಕೊಂಡಿವೆೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಆವರಿಸಿದೆ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಸುವ ನಿಟ್ಟಿನಲ್ಲಿ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿಭಟನೆಗೆ ಆಗಮಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಅವರಿಗೆ ಆಹ್ವಾನ ನೀಡಲಾಗುವುದು ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಬಾಗಲಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಜಿಸಾಬ ದಂಡಿನ, ಮುಖಂಡರಾದ ಅಡಿವೆಪ್ಪ ಚಂದಾವರೆ, ಚೇತನ ದೊಡ್ಡಮನಿ, ಶ್ರವಣ ಖಾತೆದಾರ, ಫಕೀರಪ್ಪ ಮಾದರ, ಕುಮಾರ ಕಾಳಮ್ಮನವರ, ವಿ.ಆರ್.ಚವ್ಹಾಣ್, ರಾಜು ರಾಠೋಡ ಸುದ್ದಿಗೋಷ್ಠಿಯಲ್ಲಿ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net