ಬೆಂಬಲ ಬೆಲೆಯಡಿ ಜೋಳ ಖರೀದಿ

BKT NEWS 3-1
Published on

ಬಾಗಲಕೋಟೆ: ಪ್ರಸಕ್ತ ಸಾಲಿನ ಹಂಗಾಮಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್‌ಗೆ ಬಿಳಿ ಜೋಳ (ಹೈಬ್ರಿಡ್) 2620 ರೂ. ಬಿಳಿಜೋಳ (ಮಾಲ್ದಂಡಿ) 2640 ರೂ.ಗಳಂತೆ ಖರೀದಿಸಲು ಸರ್ಕಾರ ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರಿಂದ ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಗರಿಷ್ಠ 75 ಕ್ವಿಂಟಾಲ್ ಬಿಳಿ ಜೋಳವನ್ನು ಖರೀದಿಸಲಾಗುತ್ತಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ ಎ್.ಎ.ಕ್ಯೂ ಗುಣಮಟ್ಟದ ಮಾನದಂಡಗಳ ಆಧಾರ ಮೇಲೆ ಗ್ರೇಡರ್‌ಗಳು ದೃಢೀಕರಿಸಿದ ಉತ್ಪನ್ನಗಳನ್ನು ಮಾತ್ರ ಖರೀದಿಸಲಾಗುತ್ತದೆ ಎಂದರು.

ಸರ್ಕಾರವು ಕೃಷಿ ಇಲಾಖೆಯಿಂದ ನೀಡಿರುವ ರೈತರ ನೋಂದಣಿ ಮತ್ತು ಏಕೀಕೃತ ಲಾನುಭವಿ ಮಾಹಿತಿ ವ್ಯವಸ್ಥೆ (ಫ್ರೂಟ್ಸ್) ಗುರುತಿನ ಸಂಖ್ಯೆ ಮೂಲಕ ನೋಂದಾಯಿತ ರೈತರಿಂದ ಮಾತ್ರ ಖರೀದಿಸುವಂತೆ ಆದೇಶಿಸಿದ್ದಾರೆ. ಈ ಗುರುತಿನ ಸಂಖ್ಯೆ ಹೊರತುಪಡಿಸಿ ಬೇರಾವುದೇ ದಾಖಲೆಗಳು ತರುವುದು ಅವಶ್ಯವಿರುವದಿಲ್ಲ. ನೋಂದಣಿಗೆ ಮಾ.14 ಕೊನೆಯ ದಿನವಾಗಿದೆ. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಿಂದ ಖರೀದಿಸಲಾಗುತ್ತಿದೆ. ಜಿಲ್ಲೆಯಲ್ಲಿ 64131 ಹೆಕ್ಟೇರ್ ಪ್ರದಶದಲ್ಲಿ ಬಿಳಿಜೋಳ ಬೆಳೆಯಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಆರು ತಾಲೂಕಾ ಕೇಂದ್ರಗಳಲ್ಲಿ ಬಿಳಿಜೋಳ ಖರೀದಿ ಕೇಂದ್ರ ಸ್ಥಾಪಿಸಲಾಗಿದೆ. ಬಾಗಲಕೋಟೆಯ ಎಪಿಎಂಸಿ ಆವರಣದಲ್ಲಿರುವ ಕೆ.ಎ್.ಸಿ.ಎಸ್.ಸಿ ಗೋದಾಮು, ಬಾದಾಮಿ ಎಪಿಎಂಸಿ ಆವರಣದಲ್ಲಿರುವ ಕೆ.ಎ್.ಸಿ.ಎಸ್.ಸಿ ಗೋದಾಮು, ಹುನಗುಂದ ಎಪಿಎಂಸಿ ಆವರಣದಲ್ಲಿರುವ ಕೆ.ಎ್.ಸಿ.ಎಸ್.ಸಿ ಗೋದಾಮು, ಮುಧೋಳನ ನಿರಾಣಿ ಸಕ್ಕರೆ ಕಾರ್ಖಾನೆ ಎದುರಿಗೆ ಇರುವ ಎಸ್.ಎಚ್.ಶಹ ಗೋದಾಮು, ಬೀಳಗಿ ಬಸ್ ನಿಲ್ದಾಣದ ಹತ್ತಿರವಿರುವ ಟಿಎಪಿ ಗೋದಾಮು ಹಾಗೂ ಜಮಖಂಡಿ ಎಪಿಎಂಸಿಯಲ್ಲಿ ನೊಂದಣಿ ಹಾಗೂ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.

ಪ್ರತಿಯೊಂದು ಖರೀದಿ ಕೇಂದ್ರಗಳಿಗೆ ತಲಾ ಒಬ್ಬರಂತೆ ಕೃಷಿ ಇಲಾಖೆಯಿಂದ ಗ್ರೇಡರ್‌ಗಳನ್ನು ನೇಮಿಸಬೇಕು ಕೃಷಿ ಜಂಟಿ ನಿರ್ದೇಶಕರಿಗೆ ಸೂಚಿಸಿದರು. ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು. ರೈತರ ಫ್ರೂಟ್ಸ್ ಗುರುತಿನ ಸಂಖ್ಯೆಯ ನೋಂದಣಿ ಕಡ್ಡಾಯವಾಗಿದ್ದು, ಅಂತಹ ರೈತರಿಂದ ಮಾತ್ರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಅವಕಾಶವಿರುತ್ತದೆ. ಖರೀದಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಅಂತರ್‌ಜಾಲ ವ್ಯವಸ್ಥೆ, ಕಂಪ್ಯೂಟರ್, ಪ್ರೀಂಟರ್ ಮತ್ತು ಅದಕ್ಕೆ ಬೇಕಾಗುವ ಇನ್ನೀತರ ಅಗತ್ಯ ಉಪಕರಣಗಳು, ಲೇಖನ ಸಾಮಗ್ರಿಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಎ.ಲಕ್ಕುಂಡಿ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶಿಲ್ಪಾ ಸುರಪುರ, ಎಪಿಎಂಸಿ ಕಾರ್ಯದರ್ಶಿಗಳಾದ ಜಮಖಂಡಿಯ ಎಸ್.ಎನ್.ಪತ್ತಾರ ಉಪಸ್ಥಿತರಿದ್ದರು.

ಬೆಂಬಲ ಬೆಲೆಯಲ್ಲಿ ಬಿಳಿ ಜೋಳ ಖರೀದಿ ಮಾಡಲಾಗುತ್ತದೆ. ಸರ್ಕಾರದ ಮಾರ್ಗಸೂಚಿಯಂತೆ ಎ್.ಎ.ಕ್ಯೂ ಗುಣಮಟ್ಟದ ಜೋಳ ಖರೀದಿ ಮಾಡಲಾಗುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು.
- ಕೆ.ರಾಜೇಂದ್ರ ಜಿಲ್ಲಾಧಿಕಾರಿ

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net