

ಬಾಗಲಕೋಟೆ: ವಿದೇಶದಿಂದ ಜಿಲ್ಲೆಗೆ ಆಗಮಿಸಿದ ಒಟ್ಟು 124 ವ್ಯಕ್ತಿಗಳ ಪೈಕಿ 3 ವ್ಯಕ್ತಿಗಳ ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಯಾವುದೇ ಕರೊನಾ ಸೋಂಕು ಇಲ್ಲ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಗೆ ಮಾ.13 ರಿಂದ ಇಲ್ಲಿವರೆಗೆ ಒಟ್ಟು 124 ವ್ಯಕ್ತಿಗಳು ವಿದೇಶದಿಂದ ಆಗಮಿಸಿದ್ದು, ಅವರೆಲ್ಲರನ್ನು 14 ದಿನ ಕಾಲ ಮನೆಯಲ್ಲಿಯೇ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ನಿಗಾವಹಿಸಲಾಗುತ್ತಿದೆ. 124 ವ್ಯಕ್ತಿಗಳ ಪೈಕಿ 4 ವ್ಯಕ್ತಿಗಳ 14 ದಿನಗಳ ಕ್ವಾರಂಟೈನ್ ಪೂರ್ಣಗೊಂಡಿರುತ್ತದೆ. ಜಿಲ್ಲೆಯಲ್ಲಿ ಇಲ್ಲಿವರೆಗೆ ಯಾವುದೇ ಕರೊನಾ ಸೋಂಕು ತಗಲಿರುವ ಪ್ರಕರಣಗಳು ಕಂಡು ಬಂದಿರುವುದಿಲ್ಲ. ಜಿಲ್ಲೆಯ ಜನತೆ ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
EndFragment