ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

captain dr k rajendra
Published on

ಬಾಗಲಕೋಟೆ: ರಾಜ್ಯದಲ್ಲಿ ಕರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಎಲ್ಲ ಕ್ಲಬ್, ಮಾಲ್, ಸಿನಿಮಾ ಮಂದಿರ ಹಾಗೂ ಶಾಲಾ-ಕಾಲೇಜುಗಳನ್ನು ಒಂದು ವಾರಗಳ ಕಾಲ ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಸರ್ಕಾರ ಆದೇಶದನ್ವಯ ಜಿಲ್ಲೆಯಲ್ಲಿರುವ ಕ್ಲಬ್, ಮಾಲ್, ಸಿನಿಮಾ ಮಂದಿರ ಹಾಗೂ ಶಾಲಾ ಕಾಲೇಜುಗಳು ಮಾ.14 ರಿಂದ ಒಂದು ವಾರಗಳ ಕಾಲ ಬಂದ್ ಮಾಡತಕ್ಕದ್ದು. ಇನ್ನು ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ, ಖಾಸಗಿ ಅನುದಾನಿತ ಕಾಲೇಜುಗಳಿಗೆ ಮಾ.14 ರಿಂದ 28 ವರೆಗೆ ಒಟ್ಟು 15 ದಿನಗಳ ಕಾಲ ರಜೆ ನೀಡಲಾಗಿದೆ. ಆದರೆ ಪರೀಕ್ಷೆಗಳು ಮಾತ್ರ ನಿಗದಿತ ದಿನಾಂಕ ಸಮಯದಂತೆ ನಡೆಯಲಿವೆ ಎಂದು ಆದೇಶದಲ್ಲಿ ತಿಳಿಸಿದೆ.

ಇದರ ಜೊತೆಗೆ ಸಾರ್ವಜನಿಕ ಸರ್ಕಾರಿ ಮತ್ತು ಖಾಸಗಿ ಬೇಸಿಗೆ ಶಿಬಿರಗಳು, ಸಭೆ ಸಮಾರಂಭಗಳು, ಕ್ರೀಡಾಕೂಟಗಳು, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮ ಆಯೋಜಿಸದಂತೆ ಸೂಚಿಸಿದ್ದಾರೆ. ಸರ್ಕಾರ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳು, ಸರ್ಕಾರಿ ವಸತಿ ಶಾಲೆಗಳಲ್ಲಿ ಹೆಚ್ಚಿನ ಕಾಳಜಿ ವಹಿಸತಕ್ಕದ್ದು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net