ಕೋವಿಡ್ ಸೋಂಕಿಗೆ ಮತ್ತೆ ಇಬ್ಬರು ಬಲಿ

captain dr k rajendra
Published on

ಬಾಗಲಕೋಟೆ: ಹೆಮ್ಮಾರಿ ಕೋವಿಡ್ ಸೋಂಕು ಜಿಲ್ಲೆಯಲ್ಲಿ ನಿತ್ಯ ಹೆಚ್ಚಾಗ ತೊಡಗಿದ್ದು, ತಲ್ಲಣ ಸೃಷ್ಟಿ ಮಾಡುತ್ತಿದೆ. ಬುಧವಾರ ಒಂದೇ ದಿನ ಕೋಟೆನಾಡಿನಲ್ಲಿ 158 ಜನರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 26, ಬಾದಾಮಿ 45, ಹುನಗುಂದ 29, ಬೀಳಗಿ 10, ಮುಧೋಳ 25, ಜಮಖಂಡಿ 23 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 95 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಸದ್ಯಕ್ಕೆ 680 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12024 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 11089 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 122 ಮೃತ ಪ್ರಕರಣ ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net