133 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ತೀವ್ರಗೊಳ್ಳುತ್ತಿದ್ದು, ನಿತ್ಯವು ಸೋಂಕಿತರ ಸಂಖ್ಯೆ ನೂರರ ಗಡಿದಾಟುತ್ತಿದೆ. ಗುರುವಾರ ಹೊಸದಾಗಿ 133 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 32, ಬಾದಾಮಿ 8, ಹುನಗುಂದ 17, ಬೀಳಗಿ 6, ಮುಧೋಳ 32, ಜಮಖಂಡಿ 38 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 48 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 12157 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 11137 ಜನ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1251 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net