159 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 148 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 159 ಜನರಿಗೆ ಕೋವಿಡ್ ಸೋಂಕು ಅಂಟಿಕೊಂಡಿದೆ. ಚಿಕಿತ್ಸೆ ಫಲಕಾರಿಯಾಗದೇ ಓರ್ವ ಸೋಂಕಿತ ಸೋಮವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10985 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9925 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 29, ಬಾದಾಮಿ 24, ಹುನಗುಂದ 31, ಬೀಳಗಿ 8, ಮುಧೋಳ 36, ಜಮಖಂಡಿ 31 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 950 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net