98 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 334 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 98 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೂರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11288 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 1050 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 21, ಬಾದಾಮಿ 13, ಹುನಗುಂದ 19, ಬೀಳಗಿ 3, ಮುಧೋಳ 23, ಜಮಖಂಡಿ 19 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರಿಕ್ಷಿಸಲಾಗುತ್ತಿದ್ದ 1170 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 120738 ಸ್ಯಾಂಪಲ್ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 107769 ನೆಗಟಿವ್ ಪ್ರಕರಣ, 11288 ಪಾಜಿಟಿವ್ ಪ್ರಕರಣ ಹಾಗೂ 116 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 671 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೇನ್ಮೆಂಟ ಝೋನ್ 438 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net