7 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್-19 ದಿಂದ 10 ಜನ ಗುಣಮುಖರಾಗಿದ್ದು, ಹೊಸದಾಗಿ 7 ಕೋವಿಡ್ ಪ್ರಕರಣಗಳು ಗುರುವಾರ ದೃಢಪಟ್ಟಿವೆ. ಹೊಸದಾಗಿ ಬಾದಾಮಿ, ಮುಧೋಳ ತಲಾ 1, ಹುನಗುಂದ 2, ಜಮಖಂಡಿ 3 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13535 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13302 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 1915 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿವರೆಗೆ ಒಟ್ಟು 211861 ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 195900 ನೆಗೆಟಿವ್ ಪ್ರಕರಣ ಹಾಗೂ 136 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 97 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net