

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 5 ಜನ ಗುಣಮುಖರಾಗಿದ್ದು, ಹೊಸದಾಗಿ 1 ಕೋವಿಡ್ ಪ್ರಕರಣ ಗುರುವಾರ ದೃಢಪಟ್ಟಿದೆ.ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13811 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13656 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 2503 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 402204 ಸ್ಯಾಂಪಲ್‌ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 385326 ನೆಗಟಿವ್ ಪ್ರಕರಣ, ಹಾಗೂ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 19 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.