

ಬಾಗಲಕೋಟೆ: ಜಿಲ್ಲೆಯಲ್ಲಿ 79 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 129 ಕೋವಿಡ್ ಪ್ರಕರಣಗಳು ಭಾನುವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11617 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10833 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 31, ಬಾದಾಮಿ 23, ಹುನಗುಂದ 21, ಬೀಳಗಿ 4, ಮುಧೋಳ 27, ಜಮಖಂಡಿ 23 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿರುವ 1328 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 126368 ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗುತ್ತಿದ್ದು, ಈ ಪೈಕಿ 112912 ನೆಗೆಟಿವ್, 11617 ಪಾಸಿಟಿವ್ ಹಾಗೂ 117 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 667 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
EndFragment