161 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 69 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 161 ಜನರಿಗೆ ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11778 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 10902 ಜನರು ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನ 36, ಬಾದಾಮಿ 29, ಹುನಗುಂದ 19, ಬೀಳಗಿ 2, ಮುಧೋಳ 41, ಜಮಖಂಡಿ ತಾಲೂಕಿನ 34 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರಿಗೆ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1215 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 127287 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗುತ್ತಿದ್ದು, ಈ ಪೈಕಿ 113783 ನೆಗೆಟಿವ್ ಪ್ರಕರಣ,11778 ಪಾಸಿಟಿವ್ ಪ್ರಕರಣ ಹಾಗೂ 119 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 757 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಜೋನ್ 438 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net