84 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 92 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 84 ಜನರಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11069 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10017 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 17, ಬಾದಾಮಿ 12, ಹುನಗುಂದ 15, ಬೀಳಗಿ 3, ಮುಧೋಳ 20, ಜಮಖಂಡಿ 17 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 117254 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 104531 ನೆಗೆಟಿವ್, 11069 ಪಾಸಿಟಿವ್ ಹಾಗೂ 110 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 942 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಜೋನ್ 438 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net