51 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 72 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 51 ಜನರಿಗೆ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸೋಂಕಿತರ ಸೋಮವಾರ ಮೃತಪಟ್ಟಿದ್ದಾರೆ.

ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 15, ಬಾದಾಮಿ 5, ಬೀಳಗಿ 2, ಜಮಖಂಡಿ 10, ಹುನಗುಂದ 9, ಮುಧೋಳ 10 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12983 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿವರೆಗೆ ಒಟ್ಟು 12524 ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1313 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net