719 ಹೊಸ ಪ್ರಕರಣ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 242 ಜನ ಗುಣಮುಖರಾಗಿದ್ದು, ಹೊಸದಾಗಿ 719 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೆ ಮೂರು ಜನ ಬುಧವಾರ ಸೋಂಕಿಗೆ ಬಲಿಯಾಗಿದ್ದಾರೆ.

ಹೊಸದಾಗಿ ಬಾಗಲಕೋಟೆ 176, ಬಾದಾಮಿ 93, ಜಮಖಂಡಿ 53, ಹುನಗುಂದ 137, ಮುಧೋಳ 150, ಬೀಳಗಿ ತಾಲೂಕಿನ 110 ಜನರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 20,259 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 16,329 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 3195 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು 3,761 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net