676 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 920 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 676 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೂವರು ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿವರೆಗೆ 26,097 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿವರೆಗೆ 18,909 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 238, ಬಾದಾಮಿ 69, ಜಮಖಂಡಿ 159, ಹುನಗುಂದ 90, ಮುಧೋಳ 110, ಬೀಳಗಿ 10 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1850 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿವರೆಗೆ ಒಟ್ಟು 5,81,489 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 5,52,942 ನೆಗೆಟಿವ್ ಪ್ರಕರಣ ಹಾಗೂ 209 ಮೃತ ಪ್ರಕರಣಗಳು ವರದಿಯಾಗಿರುತ್ತವೆ. ಇನ್ನು 6979 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net