

ಬಾಗಲಕೋಟೆ: ಜಿಲ್ಲೆಯಲ್ಲಿ ಇಬ್ಬರು ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ ಯಾವುದೇ ಕರೊನಾ ಪ್ರಕರಣಗಳು ಮಂಗಳವಾರ ದೃಢಪಟ್ಟಿಲ್ಲವೆಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 13761 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13615 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 136 ಮೃತ ಪ್ರಕರಣ ವರದಿಯಾಗಿವೆ. ಇನ್ನು 10 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.