

ಬಾಗಲಕೋಟೆ: ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಕೋವಿಡನಿಂದ ಗುಣಮುಖರಾಗಿದ್ದು, ಹೊಸದಾಗಿ ಯಾವುದೇ ಕೋವಿಡ್ ಪ್ರಕರಣಗಳು ಗುರುವಾರ ದೃಡಪಟ್ಟಿಲ್ಲ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13779 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13639 ಜನ ಕೋವಿಡನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1002 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 381315 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 365970 ನೆಗಟಿವ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 4 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.