

ಬಾಗಲಕೋಟೆ: ಜಿಲ್ಲೆಯಲ್ಲಿ ಮೂವರು ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ ಒಂದು ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13810 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13651 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 2855 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 399862 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 382633 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 23 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.