

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ-19 ಗೆ ಇಬ್ಬರು ಗುಣಮುಖರಾಗಿದ್ದು, ಹೊಸದಾಗಿ 6 ಕೋವಿಡ್ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13840 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13666 ಜನ ಕೋವಿಡನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 3322 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 422691 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 404965 ನೆಗಟಿವ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 38 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.
EndFragment