610 ಹೊಸ ಪ್ರಕರಣ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 831 ಜನ ಗುಣಮುಖರಾಗಿದ್ದು, ಹೊಸದಾಗಿ 610 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಹೆಮ್ಮಾರಿ ಅಟ್ಟಹಾಸಕ್ಕೆ ಜಿಲ್ಲೆಯಲ್ಲಿ ಬುಧವಾರ ಮತ್ತೆ ಇಬ್ಬರು ಬಲಿಯಾಗಿದ್ದಾರೆ.

ಹೊಸದಾಗಿ ಬಾಗಲಕೋಟೆ-175, ಬಾದಾಮಿ- 79, ಜಮಖಂಡಿ-171, ಹುನಗುಂದ 85, ಮುಧೋಳ-49, ಬೀಳಗಿ ತಾಲೂಕಿನ 51 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1490 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. 211 ಮೃತ ಪ್ರಕರಣಗಳು ವರದಿಯಾಗಿವೆ. 6756 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net