ಬಾಗಲಕೋಟೆ ಜಿಲ್ಲೆಯಲ್ಲಿ 112 ಹೊಸ ಕೋವಿಡ್‌ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 193 ಜನ ಗುಣಮುಖರಾಗಿದ್ದು, ಹೊಸದಾಗಿ 112 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಿಸದೆ ಮೂರು ಜನರು ಸೋಮವಾರ ಮೃತಪಟ್ಟಿದ್ದಾರೆ.

ಲ್ಲಿಯವರೆಗೆ 34298 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 32028 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 35, ಬಾದಾಮಿ 9, ಜಮಖಂಡಿ 30, ಹುನಗುಂದ 25, ಮುಧೋಳ 7, ಬೀಳಗಿ ತಾಲೂಕಿನ 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಹುನಗುಂದ ತಾಲೂಕಿನ ಹಿರೇಮಾಗಿ, ಬಾದಾಮಿ ತಾಲೂಕಿನ ಜಾಲಿಹಾಳ ಹಾಗೂ ಇಳಕಲ್ಲ ತಾಲೂಕಿನ ಗುಗ್ಗಲಮರಿ ಗ್ರಾಮದಲ್ಲಿ ತಲಾ ಒಬ್ಬರು ಸೇರಿ 3 ಜನ ಮೃತಪಟ್ಟಿದ್ದಾರೆ. 289 ಮೃತ ಪ್ರಕರಣಗಳು ವರದಿಯಾಗಿವೆ. ಇನ್ನೂ 1872 ಮಾತ್ರ ಸಕ್ರಿಯ ಪ್ರಕರಣಗಳು ಇವೆ. 498 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net