

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 313 ಜನ ಗುಣಮುಖರಾಗಿದ್ದು, ಹೊಸದಾಗಿ 57 ಕರೊನಾ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸೋಂಕಿತರು ಸೋಮವಾರ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 34,774 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿವರೆಗೆ ಒಟ್ಟು 33,038 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 2528 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು 1432 ಮಾತ್ರ ಸಕ್ರಿಯ ಪ್ರಕರಣಗಳು ಇದೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 14, ಬಾದಾಮಿ 10, ಬೀಳಗಿ 8, ಜಮಖಂಡಿ 11, ಮುಧೋಳ 8 ಹಾಗೂ ಹುನಗುಂದಲ್ಲಿ 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಪಾಸಿಟಿವಿಟಿ ಪ್ರಮಾಣ ಶೇ. 2.67 ಇದೆ.
ಹೊಸದಾಗಿ ದೃಢಪಟ್ಟ 57 ಕೋವಿಡ್ ಪ್ರಕರಣಗಳಲ್ಲಿ 16 ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 41 ಜನ ಹೋಮ್ ಐಸೋಲೇಷನ್‌ದಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಬೀಳಗಿ ತಾಲೂಕಿನಲ್ಲಿ ಶೇ. 4.02 ರಷ್ಟು ಪಾಸಿಟಿವಿಟಿ ಪ್ರಮಾಣ ಕಂಡುಬಂದರೆ, ಅತಿ ಕಡಿಮೆ ಶೇ.1.82 ಹುನಗುಂದ ತಾಲೂಕಿನಲ್ಲಿ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.