ಬಾಗಲಕೋಟೆ ಜಿಲ್ಲೆಯಲ್ಲಿ 4 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ ಓರ್ವ ವ್ಯಕ್ತಿ ಗುಣಮುಖರಾಗಿದ್ದು, ಹೊಸದಾಗಿ 4 ಕರೊನಾ ಪ್ರಕರಣಗಳು ಬುಧವಾರ ದೃಢಪಟ್ಟಿವೆ.
ಜಿಲ್ಲೆಯಲ್ಲಿ ಇಲ್ಲಿವರೆಗೆ 35,042 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 34,682 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 1903 ಸ್ಯಾಂಪಲ್‌ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಇನ್ನು 37 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಹೊಸದಾಗಿ ದೃಢಪಟ್ಟ 4 ಕೋವಿಡ್ ಪ್ರಕರಣಗಳಲ್ಲಿ ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ, ಮೂವರು ಹೋಮ್ ಐಸೋಲೇಷನ್‌ದಲ್ಲಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net