14 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 19 ಜನ ಕೋವಿಡ್‌ನಿಂದ 7 ಜನ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 14 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 4, ಬಾದಾಮಿ 2, ಹುನಗುಂದ 3, ಮುಧೋಳ 3, ಜಮಖಂಡಿ 2 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 485 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಈವೆಗೆ 13400 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13157 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 175366 ಸ್ಯಾಂಪಲ್‌ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 160970 ನೆಗಟಿವ್ ಪ್ರಕರಣ, ಹಾಗೂ 132 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 150 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೇನ್ಮೆಂಟ್ ರೆನ್ 121 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net