8 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 5 ಜನ ಗುಣಮುಖರಾಗಿದ್ದು, ಹೊಸದಾಗಿ 8 ಕೋವಿಡ್ ಪ್ರಕರಣಗಳು ಗುರುವಾರ ದೃಢಪಟ್ಟಿವೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 2, ಬಾದಾಮಿ, ಮುಧೋಳ ತಲಾ 1, ಹುನಗುಂದ 2, ಜಮಖಂಡಿ 2 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13408 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13162 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 488 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 177167 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 162760 ನೆಗೆಟಿವ್ ಪ್ರಕರಣ ಹಾಗೂ 132 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 114 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net