

ಬಾಗಲಕೋಟೆ: ಜಿಲ್ಲೆಯಲ್ಲಿ 12 ಜನ ಕೋವಿಡನಿಂದ ಗುಣಮುಖರಾಗಿದ್ದು, ಹೊಸದಾಗಿ 8 ಕೋವಿಡ್ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 4, ಬಾದಾಮಿ, ಜಮಖಂಡಿ, ಮುಧೋಳ, ಹುನಗುಂದದಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13596 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 13391 ಜನ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 678 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ವರೆಗೆ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 69 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.