ಕೋವಿಡ್‌ನಿಂದ 7 ಜನ ಗುಣಮುಖ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 7 ಗುಣಮುಖರಾಗಿದ್ದು, ಸೋಮವಾರ ಯಾವುದೇ ಹೊಸ ಪ್ರಕರಣಗಳು ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13656 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13502 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 2280 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 262579 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 246132 ನೆಗೆಟಿವ್ ಪ್ರಕರಣ ಹಾಗೂ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 18 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net