12 ಹೊಸ ಪ್ರಕರಣ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 10 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 12 ಕೋವಿಡ್ ಪ್ರಕರಣಗಳು ಶನಿವಾರ ದೃಢಪಟ್ಟಿವೆ. ಹೊಸದಾಗಿ ದೃಢಪಟ್ಟವರ ಪೈಕಿ ಬಾಗಲಕೋಟೆ, ಜಮಖಂಡಿ, ಬೀಳಗಿ, ಮುಧೋಳ ತಲಾ 2, ಬಾದಾಮಿ 3 ಹಾಗೂ ಹುನಗುಂದದಲ್ಲಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13638 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13453 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 882 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 242733 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 227702 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 49 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ರಾಜೇಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net