8 ಹೊಸ ಪ್ರಕರಣ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 20 ಜನ ಕೋವಿಡನಿಂದ ಗುಣಮುಖರಾಗಿದ್ದು, ಹೊಸದಾಗಿ 8 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13912 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13712 ಜನ ಕೋವಿಡನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಜಮಖಂಡಿ ತಾಲೂಕಿನಲ್ಲಿ 5, ಬಾದಾಮಿ, ಹುನಗುಂದ, ಮುಧೋಳನಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲಾ ಕೋವಿಡ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 3897 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 453571 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 435198 ನೆಗಟಿವ ಪ್ರಕರಣ 135 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 64 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net