

ಬಾಗಲಕೋಟೆ: ಜಿಲ್ಲೆಯಲ್ಲಿ 7 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ ಮುಧೋಳ ತಾಲೂಕಿನಲ್ಲಿ 1 ಕೋವಿಡ್ ಪ್ರಕರಣಗಳು ಗುರುವಾರ ದೃಡಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13724 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13566 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 2984 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 311315 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 294047 ನೆಗಟಿವ್ ಪ್ರಕರಣ, 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 22 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.