

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 5 ಜನ ಗುಣಮುಖರಾಗಿದ್ದು, ಹೊಸದಾಗಿ 7 ಪ್ರಕರಣಗಳು ಭಾನುವಾರ ದೃಢಪಟ್ಟಿವೆ. ಹೊಸದಾಗಿ ಬಾಗಲಕೋಟೆ, ಮುಧೋಳದಲ್ಲಿ ತಲಾ 2, ಜಮಖಂಡಿಯಲ್ಲಿ 1 ಹಾಗೂ ಬೇರೆ ಜಿಲ್ಲೆಯ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 13645 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿವರೆಗೆ ಒಟ್ಟು 13458 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 1617 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 244910 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 229137 ನೆಗೆಟಿವ್ ಪ್ರಕರಣ ಹಾಗೂ 136 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 51 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ. ರಾಜೇಂದ್ರ ತಿಳಿಸಿದ್ದಾರೆ.
EndFragment