ಜಿಲ್ಲಾ ಆಸ್ಪತ್ರೆಗೆ ಡಿಸಿ ಜಾನಕಿ ಭೇಟಿ ಪರಿಶೀಲನೆ

bkt-13-1
Published on

ಬಾಗಲಕೋಟೆ: ನವನಗರದ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಗುರುವಾರ ಅನಿರೀಕ್ಷಿತಾಗಿ ಭೇಟಿ ನೀಡಿ ಆಸ್ಪತ್ರೆಯ ಕಾರ್ಯಚಟುವಟಿಕೆಯ ಬಗ್ಗೆ ಪರಿಶೀಲನೆ ನಡೆಸಿದರು.

ವಿವಿಧ ವಾರ್ಡಗಳ ಪರಿಶೀಲನೆ ಮಾಡಿ ಲೇಬರ್, ಎನ್.ಆರ್.ಸಿ ವಾರ್ಡಗಳು ಚೆನ್ನಾಗಿದ್ದು, ಉಳಿದ ವಾರ್ಡಗಳನ್ನು ಸಹ ಇದೇ ರೀತಿ ಪರಿವರ್ತನೆ ಮಾಡಲು ತಿಳಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಯೋ ಮೆಟ್ರಿಕ್ ಹಾಜರಾತಿಯನ್ನು ಎರಡು ಅವಧಿಯಲ್ಲಿ ಆಗಬೇಕು. ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಬೇಕು. ಹಾಜರಾಗದಿದ್ದಲ್ಲಿ ಅಂತಹವರಿಗೆ ನೋಟಿಸ್ ನೀಡಲು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ವಿವಿಧ ವಾರ್ಡ ಮತ್ತು ಹೊರ‌ರೋಗಿಗಳ ವಿಭಾಗಕ್ಕೆ ತೆರಳಿ ರೋಗಿಗಳ ಕ್ಷೇಮವನ್ನು ವಿಚಾರಿಸಿ ಸರಿಯಾದ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು. ಆಸ್ಪತ್ರೆಯನ್ನು ಇನ್ನಷ್ಟು ಬೆಳೆಸುವ ಕೆಲಸವಾಗಬೇಕು. ಬಂದಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವ ಕೆಲಸವಾಗಬೇಕು ಎಂದರು. ಭೇಟಿ ಸಮಯದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಸೇರಿದಂತೆ ವೈದ್ಯಾಧಿಕಾರಿಗಳು ಸಿಬ್ಬಂದಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net