

ಬಾಗಲಕೋಟೆ: ಜಿಲ್ಲೆಯಲ್ಲಿ ಸಕಾಲದಡಿ ೆಬ್ರವರಿ ಮಾಹೆಯಲ್ಲಿ ಒಟ್ಟು 88279 ಸ್ವೀಕೃತಗೊಂಡ ಅರ್ಜಿಗಳ ಪೈಕಿ 71872 ಕಡತಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಸಕಾಲ ಕಡತ ವಿಲೇವಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 48 ಇಲಾಖೆಗಳಿಗೆ ಒಟ್ಟು 530 ಸೇವೆಗಳು ಸಕಾಲದಡಿ ಬರುತ್ತಿದ್ದು, ಪ್ರತಿಯೊಂದು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸ್ವೀಕರಿಸತಕ್ಕದ್ದದ್ದು. ಮ್ಯಾನುವಲ್ ಮೂಲಕ ವಿಲೇವಾರಿ ಮಾಡತಕ್ಕದ್ದಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸಕಾಲ ಅನುಷ್ಠಾನದಲ್ಲಿ ಬಾಗಲಕೋಟೆ ಜಿಲ್ಲೆ ರಾಜ್ಯದಲ್ಲಿ 16ನೇ ಸ್ಥಾನದಲ್ಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ವೀಕೃತಗೊಂಡ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮವಹಿಸಬೇಕು. ಸಕಾಲ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪರಿಶೀಲನೆಗಾಗಿ ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು, ಪರಿಶೀಲನಾ ತಂಡ ಪ್ರತಿ ಶನಿವಾರ ತಮ್ಮ ವ್ಯಾಪ್ತಿಯಲ್ಲಿ ಬರುವ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸತಕ್ಕದ್ದು. ಪರಿಶೀಲನೆ ಸಂದರ್ಭದಲ್ಲಿ ಅತಿ ಹೆಚ್ಚು ತಿರಸ್ಕೃತ ಪ್ರಮಾಣ, ವಿಳಂಬ ವಿಲೇವಾರಿ ಹಾಗೂ ಹೆಚ್ಚಿನ ಪ್ರಮಾಣದ ಶೂನ್ಯ ಸ್ವೀಕೃತಿ ಕಚೇರಿಗಳನ್ನು ಗಮನದಲ್ಲಿರಿಸಿಕೊಂಡು ತಪಾಸಣೆ ನೆಡಸುವಂತೆ ನಿರ್ದೇಶನ ನೀಡಿದರು.
ಸಕಾಲ ಬಗ್ಗೆ ಮಾಹಿತಿ ಲಕ, ಪೋಸ್ಟರ್ಸ, ಕರಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಸಕಾಲ ಸೂಚನಾ ಲಕವನ್ನು ಹಾಕಬೇಕು. ಸಕಾಲದ ಬಗ್ಗೆ ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯಶವಂತ ಗುರುಕಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.
EndFragment