ಜಿಲ್ಲಾಡಳಿತದಿಂದ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

bkt-2-1
Published on

ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂತಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಪಂ ಸಿಇಒ ಟಿ.ಭೂಬಾಲನ್ ಅವರು ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಆಹಾರ ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ ಸೇರಿ ಇತರರು ಉಪಸ್ಥಿತರಿದ್ದರು.

ಬೇಟಿ ಬಚಾವೋ ಬೇಟಿ ಪಢಾವೋ ಸ್ಟೀಕರ್ ಬಿಡುಗಡೆ
ಕೇಂದ್ರ ಸರ್ಕಾರದ ಯೋಜನೆಯಾದ ಬೇಟಿ ಬಚಾವೋ ಬೇಟಿ ಪಢಾವೋ ಕಾರ್ಯಕ್ರಮ ಪ್ರಚಾರದ ಸ್ಟೀಕರ್‌ಗಳನ್ನು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ 2018-19ರಲ್ಲಿ 4 ಜಿಲ್ಲೆಗಳ ಪೈಕಿ ಬಾಗಲಕೋಟೆ ಜಿಲ್ಲೆಯೂ ಒಂದಾಗಿದ್ದು, ಈ ಯೋಜನೆಯ ಮುಖ್ಯ ಉದ್ದೇಶ. ಹೆಣ್ಣು ಮಕ್ಕಳ ಸಂರಕ್ಷಣೆ ಮತ್ತು ಪೋಷಣೆ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದಾಗಿದೆ ಎಂದು ತಿಳಿಸಿದರು.

ಲಿಂಗ ಪಕ್ಷಪಾತ ಮತ್ತು ಲಿಂಗ ಆಯ್ಕೆ ಮಾಡುವುದನ್ನು ತಡೆಗಟ್ಟುವುದು, ಹೆಣ್ಣು ಮಕ್ಕಳ ಉಳಿವು ಮತ್ತು ಅವರ ರಕ್ಷಣೆಯನ್ನು ಖಾತ್ರಿಗೊಳಿಸಿವುದಾಗಿದೆ ಎಂದರು.

ಸ್ಟೀಕರ್ ಬಿಡುಗಡೆ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಸಿ.ಶಿವಲಿಂಗಪ್ಪ, ಐಸಿಡಿಸಿಯ ಅಧೀಕ್ಷಕಿ ಜಯಮಾಲಾ ದೊಡಮನಿ ಸೇರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net