ಸಮಸ್ಯೆ ಪರಿಹರಿಸಲು ಒತ್ತು ಕೊಡಿ

GANGUBAI MANAKAR
Published on

ಬಾಗಲಕೋಟೆ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ಬೀದಿ ದೀಪಗಳ ಬಗ್ಗೆ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿ.ಪಂ ಸಿಇಒ ಗಂಗೂಬಾಯಿ ಮಾನಕರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ನೂತನ ಸಭಾಭವನದಲ್ಲಿ ಮಂಗಳವಾರ ಜರುಗಿದ ಗ್ರಾಮ ಪಂಚಾಯತಿಯ ಕುಡಿಯುವ ನೀರಿನ ಹಾಗೂ ವಿದ್ಯುತ್ ಶುಲ್ಕ ಪಾವತಿಗಾಗಿ ಎಸ್ಕ್ರೋ ಖಾತೆ ಹಾಗೂ 14ನೇ ಹಣಕಾಸಿನ ಅನುದಾನದಡಿ ಸರ್ಕಾರದಿಂದ ಜಮೆಯಾದ ಮೊತ್ತವನ್ನು ಗ್ರಾಮ ಪಂಚಾಯಿತಿ ವಿದ್ಯುತ್ ಶುಲ್ಕಕ್ಕೆ ಪಾವತಿಸಲು ಹೆಸ್ಕಾಂ ಅಧಿಕಾರಿಗಳಿಗೆ ಲೆಕ್ಕ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ವಿದ್ಯುತ್ ಬಿಲ್ ಕುರಿತಾದ ಸಮಸ್ಯೆಗಳನ್ನು ಬೇಗನೆ ಪರಿಹರಿಸಬೇಕು. ತಾಲೂಕಾವಾರು ಲೆಕ್ಕ ಸಮನ್ವಯ ಕಾರ್ಯಪೂರ್ಣಗೊಳಿಸಿ ತಕ್ಷಣವೇ ಹೆಸ್ಕಾಂ ಸಂಸ್ಥೆಗೆ ಹಣ ಪಾವತಿಸಬೇಕು. ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕೊಳಬಾವಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ಪಿಡಿಒಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎ.ಜಿ.ತೋಟದ, ಹೆಸ್ಕಾಂ ಅಧಿಕಾರಿಗಳು, ಜಿ.ಪಂ ಅಧಿಕಾರಿಗಳು ಉಪಸ್ಥಿತರಿದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net