

ಬಾಗಲಕೋಟೆ: ದುಬೈದಿಂದ ನಗರಕ್ಕೆ ಆಗಮಿಸಿದ ಬಾಗಲಕೋಟೆ ಜಿಲ್ಲೆಯ ಮೂಲದ ವ್ಯಕ್ತಿಗೆ ಕರೊನಾ ವೈರಸ್ ಅಂಶ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಾಗಲಕೋಟೆ ಜಿಲ್ಲೆಗೆ ದುಬೈನಿಂದ ಆಗಮಿಸಿದ ವ್ಯಕ್ತಿಯ ಗಂಟಲಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿನ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್‌ಐವಿ) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷೆ ವರದಿ ಬಂದಿದ್ದು, ವ್ಯಕ್ತಿಯಲ್ಲಿ ವೈರಸ್ ಇಲ್ಲ ಎಂದು ದೃಢಪಟ್ಟಿದೆ. ಜಿಲ್ಲೆಯ ಜನತೆ ಹೆದರುವ ಅಗತ್ಯವಿಲ್ಲ ಎಂದು ಡಿಸಿ ಹೇಳಿದ್ದಾರೆ.
ಕರೊನಾ ವೈರಸ್ ಹರಡದಂತೆ ಜಿಲ್ಲೆಯ ಜನತೆ ಮುಂಜಾಗ್ರತೆ ಕ್ರಮವಾಗಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೆಮ್ಮುವಾಗ ಮತ್ತು ಸೀನುವಾಗ ಮೂಗು ಮತ್ತು ಬಾಯಿಯನ್ನು ಕರವಸದಿಂದ ಮುಚ್ಚಿಕೊಳ್ಳಬೇಕು. ಯಾರೂ ಕರೊನಾ ವೈರಸ್ ಬಗ್ಗೆ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
EndFragment