ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

BKT 24
Published on

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತನೋರ್ವ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಇಳಕಲ್ಲ ತಾಲೂಕಿನ ಉಪನಾಳ ಎಸ್.ಸಿ.ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ದೇವೇಂದ್ರಪ್ಪ ಮಲ್ಲಾಡದ (62) ಆತ್ಮಹತ್ಯೆಗೆ ಶರಣಾದ ರೈತ. ಸಾಲ, ಶೂಲ ಮಾಡಿ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರೆಯಿಸಿದ್ದನು. ಸರಿಯಾಗಿ ಬೆಳೆ ಬಾರದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಮನನೊಂದು ಸೋಮವಾರ ರಾತ್ರಿ ತನ್ನ ಜಮೀನಿಗೆ ತೆರಳಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪಿಕೆಪಿಎಸ್ ಬ್ಯಾಂಕ್‌ನಲ್ಲಿ 50 ಸಾವಿರ ರೂ., ವಿಜಯಮಹಾಂತೇಶ ಬ್ಯಾಂಕ್‌ನಲ್ಲಿ 3 ಲಕ್ಷ ರೂ.ಸಾಲ ಪಡೆದುಕೊಂಡಿದ್ದನು. ಈ ಸಾಲ ತೀರಿಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಮೃತ ರೈತನಿಗೆ ಪತ್ನಿ, ನಾಲ್ಕ ಜನ ಪುತ್ರಿಯರು, ಇಬ್ಬರು ಪುತ್ರಿಯರು ಇದ್ದಾರೆ. ಈ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net