ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲಿ

BKT 22-1
Published on

ಬಾಗಲಕೋಟೆ: ರೈತ, ಕಾರ್ಮಿಕ ಹಾಗೂ ಪ್ರಗತಿಪರ ಇರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಂದಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ತಹಸೀಲ್ದಾರ್ ಗುರುಸಿದ್ದಯ್ಯ ಹಿರೇಮಠ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ರೈತರ, ಕಾರ್ಮಿಕರ ಪರವಾಗಿರುವ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಸರ್ಕಾರ ರೈತರ, ಕಾರ್ಮಿಕರ ಹಿತಕ್ಕೆ ಧಕ್ಕೆ ತರಲು ಹೊರಟಿದೆ, ಜನವಿರೋಧಿ ನೀತಿ ಅನುಸರಿಸುತ್ತಿದೆ. ಈ ಕಾಯ್ದೆಗಳ ತಿದ್ದುಪಡಿಗಳನ್ನು ವಾಪಸ್ ಪಡೆಯಲು ಪ್ರಸ್ತಾವನೆಗಳನ್ನು ರಾಜ್ಯಪಾಲರಿಗೆ ಕಳುಹಿಸಬೇಕು. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ತಿದ್ದುಪಡಿಗಳ ಅನುಷ್ಠಾನವನ್ನು ತಕ್ಷೃಣ ತಡೆಹಿಡಿಯಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷೃ ಹಣಮಂತ ಮಾವಿನಮರದ, ರಾಜ್ಯ ಕಾರ್ಯದರ್ಶಿ ರವಿ ಹುಣಶ್ಯಾಳ, ತಾಲೂಕು ಅಧ್ಯಕ್ಷೃ ಸಲೀಂ ಮೋಮಿನ, ರೇಣುಕಾ ಭಜಂತ್ರಿ, ಪ್ರಭುರಾಜ ಪಾಟೀಲ, ರಾಮು ನ್ಯಾಮಗೌಡ, ಗೋಪಾಲ ಲಮಾಣಿ, ಗಂಗಾಧರ ಕಲಗುಡಿ, ವಿಲಾಸ ರಾಠೋಡ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net